Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

ಪಡ್ಡೆ ಹುಡುಗರ ಹಾರ್ಟ್​ ಬೀಟ್​ ಹೆಚ್ಚಿಸಿದ ಸಮಂತಾ ಹೊಸ ವಿಡಿಯೋ; ಅಭಿಮಾನಿಗಳು ಫಿದಾ | Samantha Hot dance in Oo Antava Oo Oo Antava video Song promo

Samantha-5.jpg


ಪಡ್ಡೆ ಹುಡುಗರ ಹಾರ್ಟ್​ ಬೀಟ್​ ಹೆಚ್ಚಿಸಿದ ಸಮಂತಾ ಹೊಸ ವಿಡಿಯೋ; ಅಭಿಮಾನಿಗಳು ಫಿದಾ

ಸದ್ಯ ಎಲ್ಲೆಲ್ಲೂ ಸಮಂತಾ ಅವರದ್ದೇ ಹವಾ. ‘ಪುಷ್ಪ’ ಸಿನಿಮಾದಲ್ಲಿ ಅವರು ಹೆಜ್ಜೆ ಹಾಕಿರುವ ‘ಊ ಅಂಟವಾ ಮಾವ.. ಊಊ ಅಂಟವಾ..’ ಹಾಡಿನ ಲಿರಿಕಲ್​ ವಿಡಿಯೋ ಸಖತ್​ ಹಿಟ್​ ಆಗಿದೆ. ಈ ಲಿರಿಕಲ್​ ಹಾಡನ್ನು ಬರೋಬ್ಬರಿ 2.1 ಕೋಟಿ ಜನರು ವೀಕ್ಷಣೆ ಮಾಡಿದ್ದಾರೆ. ರಿಲೀಸ್​ ಆಗಿ ಒಂದು ದಿನ ಕಳೆಯುವುದರೊಳಗೆ 10 ಮಿಲಿಯನ್​ (1 ಕೋಟಿಗೂ) ಅಧಿಕ ಬಾರಿ ವೀಕ್ಷಣೆ ಕಂಡಿರುವುದು ಈ ಗೀತೆಯ ಹೆಚ್ಚುಗಾರಿಕೆ. ಇದರಿಂದಾಗಿ ‘ಪುಷ್ಪ’ ಸಿನಿಮಾದ ಹವಾ ಹೆಚ್ಚಾಗಿದೆ. ಚಿತ್ರದ ಮೇಲಿದ್ದ ನಿರೀಕ್ಷೆ ದುಪ್ಪಟ್ಟಾಗಿದೆ. ಹೀಗಿರುವಾಗಲೇ ವಿಡಿಯೋ ಸಾಂಗ್​ನ ಪ್ರೋಮೋ ರಿಲೀಸ್​ ಮಾಡಲಾಗಿದೆ. ಇದರಲ್ಲಿ ಸಮಂತಾ ಬೋಲ್ಡ್​ ಆಗಿ ಹೆಜ್ಜೆ ಹಾಕಿದ್ದಾರೆ. ಹಾಡಿನಲ್ಲಿ ಕೇವಲ ಸಮಂತಾ ಫೋಟೋ ನೋಡಿದ್ದ ಅಭಿಮಾನಿಗಳು ಈಗ ಅವರ ಡ್ಯಾನ್ಸ್​ ಕಣ್ತುಂಬಿಕೊಂಡಿದ್ದಾರೆ.

ಈ ಹಾಡಿಗೆ ಖ್ಯಾತ ಸಂಗೀತ ನಿರ್ದೇಶಕ ದೇವಿ ಶ್ರೀಪ್ರಸಾದ್​ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಾಡಿನ ಪ್ರೋಮೋ ರಿಲೀಸ್​ ಆಗಿ ಸದ್ದು ಮಾಡುತ್ತಿದೆ. ಪಡ್ಡೆ ಹುಡುಗರಿಗೆ ನಶೆ ಏರಿಸುವಂತಿರುವ ಈ ಹಾಡಿನಲ್ಲಿ ಸಮಂತಾ ಅವರು ಸಖತ್​ ಹಾಟ್​ ಆಗಿ ಕಾಣಿಸಿಕೊಂಡಿದ್ದಾರೆ. ವಿಡಿಯೋ ಸಾಂಗ್​ ಬಿಡುಗಡೆ ಆಗಲಿ ಎಂದು ಕಾದಿದ್ದವರ ಕುತೂಹಲ ಈಗ ಮತ್ತಷ್ಟು ಹೆಚ್ಚಿದೆ.

ಸಮಂತಾ ಅವರಿಗೆ ಈಗ ಭರ್ಜರಿ ಡಿಮ್ಯಾಂಡ್​ ಇದೆ. ಅದೇ ರೀತಿ ಅವರು ಸಂಭಾವನೆ ಕೂಡ ಹೆಚ್ಚಿಸಿಕೊಂಡಿದ್ದಾರೆ. ಮೂಲಗಳ ಪ್ರಕಾರ ‘ಪುಷ್ಪ’ ಸಿನಿಮಾದ ಈ ಹಾಡಿನಲ್ಲಿ ನರ್ತಿಸಲು ಸಮಂತಾ ಅವರು ಬರೋಬ್ಬರಿ 1.5 ಕೋಟಿ ರೂಪಾಯಿ ಪಡೆದಿದ್ದಾರೆ ಎಂಬ ಮಾಹಿತಿ ಹರಡಿದೆ. ಆ ಬಗ್ಗೆ ಚಿತ್ರತಂಡದವರಾಗಲಿ, ಸಮಂತಾ ಆಗಲಿ ಈವರೆಗೆ ಎಲ್ಲಿಯೂ ಬಾಯಿ ಬಿಟ್ಟಿಲ್ಲ.

ಇದಲ್ಲದೇ ಸಮಂತಾಗೆ ಇಂಗ್ಲಿಷ್​ ಸಿನಿಮಾಗಳಿಂದಲೂ ಆಫರ್​ ಬಂದಿದೆ. ಇತ್ತೀಚೆಗೆ ಅವರು ‘ಅರೇಂಜ್​ಮೆಂಟ್ಸ್​ ಆಫ್​ ಲವ್​’ ಸಿನಿಮಾಗೆ ಆಯ್ಕೆಯಾದ ಬಗ್ಗೆ ಸುದ್ದಿ ಹೊರಬಿದ್ದಿತ್ತು. ಆ ಚಿತ್ರಕ್ಕೆ ಖ್ಯಾತ ನಿರ್ದೇಶಕ ಫಿಲಪ್​ ಜಾನ್​ ಅವರು ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಈ ಸಿನಿಮಾದಲ್ಲಿ ಸಮಂತಾ ಅವರು ದ್ವಿಲಿಂಗಿ ಪಾತ್ರ ಮಾಡಲಿದ್ದಾರೆ. ಅಂದರೆ, ಗಂಡು ಮತ್ತು ಹೆಣ್ಣು ಇಬ್ಬರಲ್ಲೂ ಲೈಂಗಿಕ ಆಸಕ್ತಿ ಹೊಂದಿರುವ ಮಹಿಳೆಯಾಗಿ ಅವರು ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: ನನ್ನ ಪ್ರಕಾರ ಆ ಬಗ್ಗೆ ಮಾತನ್ನು ಮುಗಿಸಿದ್ದೇನೆ: ವಿಚ್ಛೇದನದ ಬಗ್ಗೆ ಸ್ಪಷ್ಟನೆ ನೀಡಿದ ನಟಿ ಸಮಂತಾ

Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,594,487
Recovered
0
Deaths
528,673
Last updated: 5 seconds ago