Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

ಅನುಪಯುಕ್ತ ವೆಚ್ಚ ತಡೆಗೆ ಕಾರ್ಯಪಡೆ ರಚಿಸಲು ಆಡಳಿತ ಸುಧಾರಣಾ ಆಯೋಗ ಶಿಫಾರಸು | Administration Reform Commission Submits its Report to CM Basavaraj Bommai Asks to Constitute Taskforce to Curtail Expenses

CM-Basavaraj-Bommai-TM-Vijay-Bhaskar.jpg


ಅನುಪಯುಕ್ತ ವೆಚ್ಚ ತಡೆಗೆ ಕಾರ್ಯಪಡೆ ರಚಿಸಲು ಆಡಳಿತ ಸುಧಾರಣಾ ಆಯೋಗ ಶಿಫಾರಸು

ಮುಖ್ಯಮಂತ್ರ ಬಸವರಾಜ ಬೊಮ್ಮಾಯಿ ಮತ್ತು ಆಡಳಿತ ಸುಧಾರಣಾ ಆಯೋಗ ಅಧ್ಯಕ್ಷರಾದ ಟಿ.ಎಂ.ವಿಜಯ ಭಾಸ್ಕರ್

ಬೆಂಗಳೂರು: ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ, ನಿಗಮ ಮಂಡಳಿಗಳಲ್ಲಿ ಆಗುವ ಅನುಪಯುಕ್ತ ವೆಚ್ಚಗಳ ತಡೆಗೆ ಅನುಪಯುಕ್ತ ವೆಚ್ಚ ತಡೆ ಕಾರ್ಯಪಡೆ ರಚಿಸಬೇಕು ಎಂದು ಆಡಳಿತ ಸುಧಾರಣಾ ಆಯೋಗ ಶಿಫಾರಸು ಮಾಡಿದೆ. ಸರ್ಕಾರದ ಸಚಿವಾಲಯದಲ್ಲಿ ಯಾವುದೇ ಇಲಾಖೆಯ ಕಡತಗಳು ಮೂರು ಅಥವಾ ನಾಲ್ಕು ಹಂತಗಳಿಗಿಂತ ಹೆಚ್ಚು ಓಡಾಡಬಾರದು. ಪ್ರಸ್ತುತ ರಾಜ್ಯದಲ್ಲಿ ಕಡತಗಳು 5ರಿಂದ 10 ಹಂತಗಳಲ್ಲಿ ಚಲಾವಣೆಯಾಗುತ್ತಿವೆ. ಎಲ್ಲ ಇಲಾಖೆಗಳಲ್ಲಿ ಸೂಚಿಸಿದ ಗ್ರೂಪ್-ಸಿ ಮತ್ತು ಡಿ ನೌಕರರ ವರ್ಗಾವಣೆಯನ್ನು ಗಣಕೀಕೃತ ಕೌನ್ಸೆಲಿಂಗ್‌ ಮೂಲಕ ಮಾಡಲು ಕಾಯ್ದೆ ಜಾರಿಗೆ ತರಬಹುದು. ರಾಜ್ಯದಲ್ಲಿರುವ ಎಲ್ಲ ಅಂಚೆ ಕಚೇರಿಗಳಲ್ಲಿ ರಾಜ್ಯ ಸರ್ಕಾರದ ಸೇವೆಗಳನ್ನು ಒದಗಿಸಲು ಬಳಸಿಕೊಳ್ಳಬಹುದು. ಪ್ರಸ್ತುತ ಅಂಚೆ ಕಚೇರಿಗಳು ಭಾರತ ಸರ್ಕಾರದ ಸೇವೆಗಳನ್ನು ಒದಗಿಸುತ್ತಿವೆ ಎಂದು ಆಡಳಿತ ಸುಧಾರಣಾ ಆಯೋಗ ಹೇಳಿದೆ.

ಗ್ರಾಮ ಮಟ್ಟದ ಉದ್ಯಮಿಗಳಿಂದ (Village Lever Enterprises – VLE) ಸ್ಥಾಪಿಸಿರುವ ಸಾಮಾನ್ಯ ಸೇವಾ ಕೇಂದ್ರಗಳನ್ನು ರಾಜ್ಯವು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬಳಸಿಕೊಳ್ಳುವುದರ ಮೂಲಕ ಸರ್ಕಾರಿ ಮತ್ತು ಸರ್ಕಾರೇತರ ಸೇವೆಗಳನ್ನು ಮನೆ ಬಾಗಿಲಿಗೆ ಒದಗಿಸಲು ವಿಎಲ್​ಇಗಳನ್ನೇ ‘ಜನಸೇವಕ’ರಾಗಿ ಬಳಸಿಕೊಳ್ಳಬಹುದು. ಜಿಲ್ಲಾಧಿಕಾರಿಗೆ ಸಾರ್ವಜನಿಕ ಉದ್ದೇಶಕ್ಕಾಗಿ ಸರ್ಕಾರದ ಇಲಾಖೆಗಳಿಗೆ ನಾಲ್ಕು ಹೆಕ್ಟೇರ್‌ವರೆಗೆ ಮತ್ತು ಜಮೀನಿನ ಮೌಲ್ಯವು ₹ 5 ಕೋಟಿ ಮೀರದ ಸರ್ಕಾರಿ ಜಮೀನನ್ನು ಪರಿವರ್ತನಾ ಶುಲ್ಕದ ವಿನಾಯಿತಿ ನೀಡಿ ಉಚಿತವಾಗಿ ಮಂಜೂರು ಮಾಡುವ ಹೆಚ್ಚಿನ ಅಧಿಕಾರವನ್ನು ನೀಡಬಹುದು ಎಂದು ಆಯೋಗ ತಿಳಿಸಿದೆ.

ಸಾರ್ವಜನಿಕ ಉದ್ಯಮಗಳ ಇಲಾಖೆಯನ್ನು (Department of Public Enterprises – DPE) ಆರ್ಥಿಕ ಇಲಾಖೆಯಲ್ಲಿ ವಿಲೀನಗೊಳಿಸಬಹುದು. ಭೂಸ್ವಾಧೀನಕ್ಕೆ ಪರಿಹಾರ ಧನದ ಪಾವತಿಯು ಕಾಲಮಿತಿಯದ್ದಾಗಿರಬೇಕು. ಕಾಲಮಿತಿಯಲ್ಲಿ ಪಾವತಿಸದಿದ್ದರೆ ವಿಳಂಬವಾದ ಅವಧಿಗೆ ಅನವಶ್ಯಕಾಗಿ ಹೆಚ್ಚುವರಿ ಪರಿಹಾರ ಧನವನ್ನು ಪಾವತಿಸಬೇಕಾಗುತ್ತದೆ. ಇದನ್ನು ತಪ್ಪಿಸಬೇಕು. ಪರಿಹಾರ ಧನವನ್ನು ಆಧಾರ್‌ ಮೂಲಕವೇ ಪಾವತಿ ಮಾಡುವಂತೆ ಪ್ರಕ್ರಿಯೆಗೊಳಿಸಬೇಕು. ಇದರಿಂದ ಚೆಕ್‌ ಮೂಲಕ ಪರಿಹಾರ ಧನಪಾವತಿಯಲ್ಲಿ ಆಗುತ್ತಿರುವ ವಂಚನೆಯನ್ನು ತಡೆಗಟ್ಟಬಹುದು ಎಂದು ಆಯೋಗವು ಹೇಳಿದೆ.

ಅಧಿಕಾರಿಗಳ ಮತ್ತು ಸಿಬ್ಬಂದಿವರ್ಗದವರ ಕಾರ್ಯನಿರ್ವಹಣೆಯನ್ನು ಮೌಲ್ಯಮಾಪನ ಮಾಡುವ ನಮೂನೆಯನ್ನು ಪರಿಷ್ಕರಿಸಿದ್ದು ಅದರಂತೆ ಕ್ರಮವಹಿಸಬಹುದು. ಇಲಾಖೆಗಳ ಕಾರ್ಯಕ್ಷಮತೆ ನಿರ್ವಹಣೆ ಮತ್ತು ಮೌಲ್ಯಮಾಪನ ಪದ್ದತಿಯನ್ನು ಜಾರಿಗೊಳಿಸಿ ಇಲಾಖೆಗಳ ಮೌಲ್ಯಮಾಪನ ಮಾಡಬಹುದು. ರಾಷ್ಟ್ರಮಟ್ಟದಲ್ಲಿ ರಾಜ್ಯದ ಸೂಚ್ಯಾಂಕವನ್ನು ಸುಧಾರಿಸಲು ಬಹು ವಲಯ, ವಲಯ ಸೂಚ್ಯಂಕಗಳ ವಿಶ್ಲೇಷಣೆ, ಸುಧಾರಣೆ, ಮೇಲ್ವಿಚಾರಣೆ ಮಾಡಲು ಸಮಿತಿ ರಚಿಸಲು ಕ್ರಮ ತೆಗೆದುಕೊಳ್ಳಬಹಬುದು ಮತ್ತು ಇವೇ ಸೂಚ್ಯಂಕಗಳ ಆಧಾರದ ಮೇಲೆ ಜಿಲ್ಲಾ ಮತ್ತು ತಾಲ್ಲೂಕುಗಳ ಶ್ರೇಣಿಗಳನ್ನು ಪ್ರಕಟಿಸಬೇಕು. ಅತಿ ಹೆಚ್ಚಿನ ಮೌಲ್ಯದ ಟೆಂಡರ್‌ಗಳನ್ನು ಕರೆಯುವ ಮೊದಲು ಕರಡು ಬಿಡ್‌ ಡ್ಯಾಕ್ಯುಮೆಂಟ್‌ನ್ನು ಇ-ಪ್ರೊಕ್ಯುರ್‌ಮೆಂಟ್‌ ವೆಬ್‌ಸೈಟ್‌ ಮೂಲಕ ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಬಹುದು. ಆಕ್ಷೇಪಣೆಗಳಿಗೆ ಇಲಾಖೆಗಳು ತಮ್ಮ ನಿರ್ಧಾರಗಳನ್ನು ದಾಖಲಿಸಬೇಕು. ನಂತರವೇ ಬಿಡ್‌ ಡ್ಯಾಕ್ಯುಮೆಂಟ್‌ ಅಂತಿಮಗೊಳಿಸಬೇಕು ಎಂದು ತಿಳಿಸಿದೆ.

ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ವರದಿ ಸಲ್ಲಿಸಿದರು. ವರದಿಯ ಮುಖ್ಯಾಂಶಗಳ ಮಾಹಿತಿ ಪಡೆದ ಮುಖ್ಯಮಂತ್ರಿಗಳು ವರದಿಯಲ್ಲಿ ಮಾಡಿರುವ ಶಿಫಾರಸುಗಳನ್ನು ಪರಿಶೀಲಿಸಿ, ಜಾರಿಗೆ ಸಾಧ್ಯವಿರುವ ಅಂಶಗಳನ್ನು ಅನುಷ್ಠಾನಕ್ಕೆ ತರಲು ಕ್ರಮ ವಹಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಇಂಧನ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಅಭಿವೃದ್ಧಿ, ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ಒಳಾಡಳಿತ ಇಲಾಖೆಗಳಿಗೆ ಸಂಬಂಧಿಸಿದ ಹಲವು ಶಿಫಾರಸುಗಳು ಈ ವರದಿಯಲ್ಲಿದೆ.

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಮನೆ ಬಾಗಿಲಲ್ಲಿ ಪಡಿತರ, ಎಲ್ಲಾ ಆರ್​ಟಿಒ ಸೇವೆ ಕಾಗದ ರಹಿತ..ರಾಜ್ಯದಲ್ಲಿ ಆಡಳಿತ ಸುಧಾರಣೆಗೆ ಸಲ್ಲಿಸಿದ ಶಿಫಾರಸುಗಳು ಇಲ್ಲಿವೆ

ಇದನ್ನೂ ಓದಿ: Karnataka Budget: ಮಾರ್ಚ್​ 4ರಂದು ಕರ್ನಾಟಕ ಬಜೆಟ್ ಮಂಡಿಸಲಿದ್ದಾರೆ ಸಿಎಂ ಬಸವರಾಜ ಬೊಮ್ಮಾಯಿ

Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,591,112
Recovered
0
Deaths
528,655
Last updated: 5 minutes ago