Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

ಗೆದ್ದು ಬೀಗಿದ ಆಲಿಯಾ ನಟನೆಯ ‘ಗಂಗೂಬಾಯಿ..’; ಬಾಕ್ಸ್​ ಆಫೀಸ್​ ಕಲೆಕ್ಷನ್​ನಲ್ಲಿ ಭಾರೀ ಏರಿಕೆ | Gangubai Kathiawadi Box Office Collection Alia Bhatt Movie Collection spike

Alia-Bhatt-in-Gangubai-Kathiawadi.jpg


ಗೆದ್ದು ಬೀಗಿದ ಆಲಿಯಾ ನಟನೆಯ ‘ಗಂಗೂಬಾಯಿ..’; ಬಾಕ್ಸ್​ ಆಫೀಸ್​ ಕಲೆಕ್ಷನ್​ನಲ್ಲಿ ಭಾರೀ ಏರಿಕೆ

‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದಲ್ಲಿ ಆಲಿಯಾ ಭಟ್

ಆಲಿಯಾ ಭಟ್ (Alia Bhatt)​ ನಟನೆಯ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ (Gangubai Kathiawadi  Movie) ಗೆದ್ದು ಬೀಗಿದೆ. ಈ ಸಿನಿಮಾಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಿನಿಮಾ ಗಳಿಕೆ ವಿಚಾರದಲ್ಲೂ ಹಿಂದೆ ಬಿದ್ದಿಲ್ಲ. ಮೊದಲ ದಿನಕ್ಕೆ ಹೋಲಿಕೆ ಮಾಡಿದರೆ, ಎರಡನೇ ದಿನ ಈ ಸಿನಿಮಾದ ಗಳಿಕೆ ಹೆಚ್ಚಿದೆ. ಈ ಚಿತ್ರದಿಂದ ಆಲಿಯಾ ವೃತ್ತಿ ಜೀವನಕ್ಕೆ ಮತ್ತೊಂದು ಹಿಟ್​ ಸಿಕ್ಕಂತೆ ಆಗಿದೆ. ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಶುಕ್ರವಾರ (ಫೆಬ್ರವರಿ 25) ಭಾರತೀಯ ಬಾಕ್ಸ್​ ಆಫೀಸ್​ನಲ್ಲಿ(Gangubai Kathiawadi  Collection)  ಬರೋಬ್ಬರಿ 10 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಶುಕ್ರವಾರವೇ ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಬರೋಕೆ ಶುರುವಾದವು. ಹೀಗಾಗಿ, ಶನಿವಾರದ (ಫೆಬ್ರವರಿ 26) ಗಳಿಕೆಯಲ್ಲಿ ಏರಿಕೆ ಕಂಡಿದೆ.

ಶನಿವಾರ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ 13.32 ಕೋಟಿ ಬಾಚಿಕೊಂಡಿದೆ. ಈ ಮೂಲಕ ಸಿನಿಮಾದ ಗಳಿಕೆ ಮೊದಲ ಎರಡು ದಿನಕ್ಕೆ 23.82 ಕೋಟಿ ರೂಪಾಯಿ ಆಗಿದೆ. ಇಂದು (ಫೆಬ್ರವರಿ 27) ಈ ಚಿತ್ರದ ಕಲೆಕ್ಷನ್​ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಇಂದು ಭಾನುವಾರ ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಚಿತ್ರಮಂದಿರದತ್ತ ಬರುತ್ತಾರೆ. ಹೀಗಾಗಿ, ಮೂರು ದಿನದಲ್ಲಿ ಈ ಸಿನಿಮಾ 36-37 ಕೋಟಿ ರೂಪಾಯಿ ಆಗಬಹುದು

ವಿದೇಶದಲ್ಲೂ ಈ ಸಿನಿಮಾ ಕಮಾಲ್​ ಮಾಡುತ್ತಿದೆ. ಆಸ್ಟ್ರೇಲಿಯಾದಲ್ಲಿ ಈ ಸಿನಿಮಾ 1.41 ಕೋಟಿ ರೂಪಾಯಿ ಬಾಚಿಕೊಂಡಿದೆ. ನ್ಯೂಜಿಲೆಂಡ್​ನಲ್ಲಿ 20.87 ಲಕ್ಷ ರೂಪಾಯಿ ಗಳಿಸಿದೆ. ಅಮೆರಿಕದಲ್ಲಿ 2.35 ಕೋಟಿ ಕಮಾಯಿ ಮಾಡಿದೆ. ಈ ಚಿತ್ರ ಒಳ್ಳೆಯ ರೀತಿಯಲ್ಲಿ ಗಳಿಕೆ ಮಾಡುತ್ತಿರುವುದಕ್ಕೆ ಸಿನಿಮಾ ತಂಡ ಖುಷಿ ಪಟ್ಟಿದೆ.

ಆಲಿಯಾಗೆ ಕಂಗನಾ ಮೆಚ್ಚುಗೆ:

ಆಲಿಯಾ ಭಟ್​ ಅವರು ನೆಪೋಟಿಸಂ ಫಲಾಭವಿ ಎಂದು ಕಂಗನಾ ಯಾವಾಗಲೂ ಟೀಕೆ ಮಾಡುತ್ತಾರೆ. ಆ ಕಾರಣಕ್ಕಾಗಿ ಅವರು ಆಲಿಯಾ ನಟನೆಯ ಸಿನಿಮಾಗಳೆಂದರೆ ಮೂಗು ಮುರಿಯುತ್ತಾರೆ. ಆದರೆ ಈ ಬಾರಿ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾಗೆ ಜನರಿಂದ ಸಿಗುತ್ತಿರುವ ಪ್ರತಿಕ್ರಿಯೆ ಕಂಡು ಕಂಗನಾ ಬೆರಗಾಗಿದ್ದಾರೆ. ಹಾಗಾಗಿ ಅವರು ಈ ಚಿತ್ರವನ್ನು ಮನಸಾರೆ ಹೊಗಳಿದ್ದರು. ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ತಮ್ಮ ಅನಿಸಿಕೆ ಹಂಚಿಕೊಂಡಿದ್ದರು.

‘ದಕ್ಷಿಣ ಭಾರತದ ಸಿನಿಮಾಗಳ ದಾಖಲೆಯ ಕಲೆಕ್ಷನ್​ನಿಂದಾಗಿ ಚಿತ್ರಮಂದಿರಗಳಲ್ಲಿ ಮತ್ತೆ ಕಳೆ ಬಂದಿದೆ ಎಂಬುದನ್ನು ಕೇಳಿ ಖುಷಿ ಆಯಿತು. ಸೂಪರ್​ ಸ್ಟಾರ್​ ಡೈರೆಕ್ಟರ್​, ಸ್ಟಾರ್​ ಹೀರೋ ಇರುವ ಒಂದು ಮಹಿಳಾ ಪ್ರಧಾನ ಸಿನಿಮಾದಿಂದ ಹಿಂದಿ ಚಿತ್ರರಂಗ ಕೂಡ ಪುಟ್ಟ ಹೆಜ್ಜೆಗಳನ್ನು ಇಡುತ್ತಿದೆ. ಪುಟ್ಟ ಹೆಜ್ಜೆಗಳೇ ಆಗಿರಬಹುದು, ಆದರೆ ಅವು ಮಹತ್ವವಾದವು. ಕಷ್ಟದ ಪರಿಸ್ಥಿತಿಯಲ್ಲಿ ಇರುವ ಚಿತ್ರಮಂದಿರಗಳಿಗೆ ಈ ಬೆಳವಣಿಗೆ ತುಂಬ ಮುಖ್ಯ. ಗ್ರೇಟ್​! ಇಂಥ ಸಂದರ್ಭದಲ್ಲಿ ಮೂವೀ ಮಾಫಿಯಾದವರು ಒಳ್ಳೆಯ ಕೆಲಸ ಮಾಡ್ತಾರೆ ಅಂಥ ನಾನು ನಿರೀಕ್ಷಿಸಿರಲಿಲ್ಲ. ಅವರು ಒಳ್ಳೆಯದು ಮಾಡಿದಾಗ ನಾನು ಖಂಡಿತಾ ಹೊಗಳುತ್ತೇನೆ. ಇನ್ನೂ ಒಳ್ಳೆಯದನ್ನು ನಿರೀಕ್ಷಿಸುತ್ತೇನೆ’ ಎಂದು ಕಂಗನಾ ರಣಾವತ್​ ಅವರು ಬರೆದುಕೊಂಡಿದ್ದರು.

ಇದನ್ನೂ ಓದಿ: ‘ಬಾಕ್ಸ್​ ಆಫೀಸ್​ನಲ್ಲಿ 200 ಕೋಟಿ ಸುಟ್ಟು ಬೂದಿಯಾಗಲಿದೆ’; ಆಲಿಯಾ ಭಟ್​ ಸಿನಿಮಾ ಬಗ್ಗೆ ಕಂಗನಾ ಟೀಕೆ

ಮುಂದಿನ ವರ್ಷ ಆಲಿಯಾ ಭಟ್ ಜತೆ ಮದುವೆ, ಸುಳಿವು ನೀಡಿದ ರಣಬೀರ್ ಕಪೂರ್

Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,604,463
Recovered
0
Deaths
528,745
Last updated: 9 minutes ago