Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

IPL 2022: ಹಾರ್ದಿಕ್ ಪಾಂಡ್ಯ ಹೊರಗುಳಿಯಲು ಕಾರಣವೇನು? | IPL 2022: why hardik pandya is not playing

New-Project-2022-04-17T215401.101.jpg


IPL 2022: ಹಾರ್ದಿಕ್ ಪಾಂಡ್ಯ ಹೊರಗುಳಿಯಲು ಕಾರಣವೇನು?

hardik pandya

ಐಪಿಎಲ್​​ನ 29ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಸಿಎಸ್​ಕೆ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಗುಜರಾತ್ ತಂಡದ ನಾಯಕನಾಗಿ ರಶೀದ್ ಖಾನ್ ಕಾಣಿಸಿಕೊಂಡಿದ್ದರು. ಇದುವರೆಗೆ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ತಂಡದಿಂದ ಹೊರಗುಳಿದಿದ್ದರು. ಉತ್ತಮ ಫಾರ್ಮ್​ನಲ್ಲಿದ್ದ ಪಾಂಡ್ಯ ಇದಕ್ಕಿದ್ದಂತೆ ತಂಡದಿಂದ ಹೊರಗುಳಿಯಲು ಕಾರಣವೇನು ಎಂದು ನೋಡುವುದಾದರೆ, ಫಿಟ್​ನೆಸ್ ಸಮಸ್ಯೆ. ಹಾರ್ದಿಕ್ ಪಾಂಡ್ಯಗೆ ಮತ್ತೆ ಫಿಟ್​ನೆಸ್ ಸಮಸ್ಯೆ ಎದುರಾಗಿದೆ. ಇದೀಗ ತೊಡೆಸಂದು ಭಾಗದಲ್ಲಿ ನೋವಿನ ಸಮಸ್ಯೆ ಕಾಣಿಸಿಕೊಂಡಿದ್ದು, ಹೀಗಾಗಿ ಸಿಎಸ್​ಕೆ ವಿರುದ್ದದ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಹೀಗಾಗಿ ಗುಜರಾತ್ ತಂಡವನ್ನು ರಶೀದ್ ಖಾನ್ ಮುನ್ನಡೆಸಿದ್ದಾರೆ. ಇದಾಗ್ಯೂ ಹಾರ್ದಿಕ್ ಪಾಂಡ್ಯ ಮುಂದಿನ ಪಂದ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಫಿಟ್ನೆಸ್ ಮತ್ತೆ ಟೆನ್ಶನ್:
ಈ ಐಪಿಎಲ್‌ನಲ್ಲಿ ಹಾರ್ದಿಕ್ ಪಾಂಡ್ಯ ಅವರ ಫಿಟ್‌ನೆಸ್ ಹೆಚ್ಚು ಗಮನ ಸೆಳೆದಿತ್ತು. ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ಟಿ 20 ವಿಶ್ವಕಪ್ ನಂತರ ಭಾರತೀಯ ಆಲ್‌ರೌಂಡರ್ ಐಪಿಎಲ್‌ಗೆ ನೇರ ಪಾದಾರ್ಪಣೆ ಮಾಡಿದರು. ಆದಾಗ್ಯೂ, ಹಾರ್ದಿಕ್ ಆರಂಭಿಕ ಪಂದ್ಯಗಳಿಂದ ಸಂಪೂರ್ಣವಾಗಿ ಫಿಟ್ ಆಗಿ ಕಾಣಿಸಿಕೊಂಡರು. ಬ್ಯಾಟಿಂಗ್ ಜೊತೆ ಬೌಲಿಂಗ್ ಕೂಡ ಮಾಡಿದ್ದರು. ಈ ಮೂಲಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ಸೂಚನೆ ನೀಡಿದ್ದರು. ಇದೀಗ ಮತ್ತೆ ಫಿಟ್​ನೆಸ್ ಸಮಸ್ಯೆ ಕಂಡು ಬಂದಿರುವುದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಮತ್ತು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಅನ್ನು ಸ್ವಲ್ಪ ಚಿಂತೆಗೀಡು ಮಾಡಿದೆ.

ನಾಯಕನಾಗಿ ಮಿಂಚಿಂಗ್:
ಮೊದಲ ಬಾರಿಗೆ ಐಪಿಎಲ್ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಅವರು ಐಪಿಎಲ್ 2022 ಗೆ ಉತ್ತಮ ಆರಂಭವನ್ನು ಪಡೆದಿದ್ದರು. ಅವರ ನಾಯಕತ್ವದಲ್ಲಿ ಗುಜರಾತ್ ತಂಡವು ಮೊದಲ 5 ಪಂದ್ಯಗಳಲ್ಲಿ 4 ರಲ್ಲಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಅಲಂಕರಿಸಿದೆ. ನಾಯಕನಾಗಿ ಹಾರ್ದಿಕ್ ಪಾಂಡ್ಯ ಸತತವಾಗಿ ಉತ್ತಮ ಪ್ರದರ್ಶನ ನೀಡಿದ್ದರು. ಅವರು ಸತತ ಎರಡು ಪಂದ್ಯಗಳಲ್ಲಿ ಅರ್ಧಶತಕಗಳನ್ನು ಬಾರಿಸಿ ಮಿಂಚಿದ್ದರು. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಅಜೇಯ 87 ರನ್ ಗಳಿಸಿದ್ದರು. ಅಲ್ಲದೆ ಬೌಲಿಂಗ್​ನಲ್ಲಿ 1 ವಿಕೆಟ್ ಮತ್ತು 1 ರನ್ ಔಟ್ ಮಾಡಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಸಹ ಪಡೆದಿದ್ದರು.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ





Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,591,112
Recovered
0
Deaths
528,655
Last updated: 6 minutes ago