Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

ದೆಹಲಿ ಸೇರಿ ಕೆಲ ರಾಜ್ಯಗಳಲ್ಲಿ ಕೊರೊನಾ ಹೆಚ್ಚಾಗ್ತಿದೆ; ಈಗಾಗಲೇ ಮಾಸ್ಕ್ ಧರಿಸಲು ಹೇಳಿದ್ದರೂ ಜನರು ಧರಿಸುತ್ತಿಲ್ಲ -ಆರೋಗ್ಯ ಸಚಿವ ಡಾ.ಕೆ.ಸುಧಾಕರ್ | Corona has increased in some states including Delhi People are not wearing the mask says Minister Dr k sudhakar

K-Sudhakar.jpg


ದೆಹಲಿ ಸೇರಿ ಕೆಲ ರಾಜ್ಯಗಳಲ್ಲಿ ಕೊರೊನಾ ಹೆಚ್ಚಾಗ್ತಿದೆ; ಈಗಾಗಲೇ ಮಾಸ್ಕ್ ಧರಿಸಲು ಹೇಳಿದ್ದರೂ ಜನರು ಧರಿಸುತ್ತಿಲ್ಲ -ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಡಾ.ಕೆ. ಸುಧಾಕರ್

ಬೆಂಗಳೂರು: ದೆಹಲಿ ಸೇರಿ ಕೆಲ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈಗಾಗಲೇ ಮಾಸ್ಕ್ ಧರಿಸಲು ಹೇಳಿದ್ದರೂ ಜನರು ಧರಿಸುತ್ತಿಲ್ಲ. 3ನೇ ಡೋಸ್ ಲಸಿಕೆಯನ್ನ ಸರಿಯಾಗಿ ತೆಗೆದುಕೊಂಡಿಲ್ಲ. ಸುಮಾರು 30 ಲಕ್ಷ ಜನ 2ನೇ ಡೋಸ್ ಲಸಿಕೆಯನ್ನ ಪಡೆದಿಲ್ಲ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆತಂಕ ವ್ಯಕ್ತಪಡಿಸಿದ್ದಾರೆ.

ದೆಹಲಿ ಮತ್ತು ಕೆಲ ರಾಜ್ಯಗಳಲ್ಲಿ ಕಳೆದ ಒಂದು ವಾರದಿಂದ ಗಣನೀಯವಾಗಿ ಕೊರೊನಾ ಕೇಸ್ಗಳು ಹೆಚ್ಚಾಗುತ್ತಿವೆ. ಇದರ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಸಂಗ್ರಹಿಸಲು ಸೂಚನೆ ನೀಡಿದ್ದೇನೆ. ಈಗಾಗಲೇ ಮಾಸ್ಕ್ ಧರಿಸಲು ಹೇಳಿದ್ದರೂ ಜನರು ಧರಿಸುತ್ತಿಲ್ಲ. ಮೂರನೇ ಡೋಸ್ ಯಾರು ಸರಿಯಾಗಿ ತೆಗೆದುಕೊಂಡಿಲ್ಲ. ಎರಡನೇ ಡೋಸ್ ಸುಮಾರು 30 ಲಕ್ಷ ಜನ ಇನ್ನು ತೆಗೆದುಕೊಂಡಿಲ್ಲ. ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ. ಇನ್ನು ನಮ್ಮ ರಾಜ್ಯಕ್ಕೆ ನಾಲ್ಕನೇ ಅಲೆ ಎಂಟ್ರಿ ಆಗಿಲ್ಲ. ಪ್ರತಿನಿತ್ಯ ಪರೀಕ್ಷೆ ಮಾಡುತ್ತಿದ್ದೇವೆ. ಯಾವುದೇ ರೀತಿ ಕೇಸ್ಗಳು ಏರಿಕೆಯಾಗಿಲ್ಲ. ನಿಯಮಗಳನ್ನು ಮತ್ತೆ ತರುವ ಬಗ್ಗೆ ಈಗಲೇ ಹೇಳುವುದು ಕಷ್ಟಸಾಧ್ಯ. ಈಗಿನ ಪರಿಸ್ಥಿತಿಯಲ್ಲಿ ರಾಜ್ಯ ಒಳ್ಳೆಯ ರೀತಿಯಲ್ಲಿ ನಿಯಂತ್ರಣ ಮಾಡಿದೆ. ಜನರು ಕೂಡ ಕೆಲ ನಿಯಮಗಳನ್ನು ಪಾಲನೆ ಮಾಡಬೇಕು. ಮಾಸ್ಕನ್ನು ಧರಿಸುವುದರಿಂದ ಯಾವುದೇ ರೀತಿ ತೊಂದರೆ ಇಲ್ಲ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

ಭಾರತದಲ್ಲಿ ಮತ್ತೆ ಕೊರೊನಾ ಆತಂಕ: ಕೇಂದ್ರದಿಂದ 5 ರಾಜ್ಯಗಳಿಗೆ ಪತ್ರ
ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಐದು ರಾಜ್ಯಗಳಿಗೆ ಪತ್ರ ಬರೆದು ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದೆ. ಹರಿಯಾಣ, ಉತ್ತರ ಪ್ರದೇಶ, ದೆಹಲಿ, ಮಿಜೋರಾಂ ಮತ್ತು ಮಹಾರಾಷ್ಟ್ರ ಸರ್ಕಾರಗಳಿಗೆ ಕೇಂದ್ರ ಅರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದಾರೆ. ಟೆಸ್ಟ್, ಟ್ರ್ಯಾಕ್, ಟ್ರೀಟ್ಮೆಂಟ್, ವ್ಯಾಕ್ಸಿನೇಷನ್ ಹೆಚ್ಚಿಸುವಂತೆ ಅವರು ಸಲಹೆ ಮಾಡಿದ್ದಾರೆ. ಜಿನೋಮಿಕ್ ಸೀಕ್ವೆನ್ಸಿಂಗ್ ಹೆಚ್ಚಿಸಿ, ಹೆಚ್ಚು ಜನರು ಗುಂಪು ಸೇರದಂತೆ ನಿಗಾವಹಿಸಿ, ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ, ಇತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಸೂಕ್ತ ಚಿಕಿತ್ಸೆ ನೀಡಿ ಎಂದು ಹೇಳಿದ್ದಾರೆ. ಸೋಂಕು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಸಲಹೆ ಮಾಡಿದ್ದಾರೆ.

ಭಾರತದಲ್ಲಿ ಕಳೆದ ಎರಡು ತಿಂಗಳುಗಳಿಂದ ಕೊವಿಡ್-19 ಪ್ರಕರಣಗಳು ಸತತವಾಗಿ ಇಳಿಕೆಯಾಗುತ್ತಿವೆ. ದೇಶದಲ್ಲಿ ಪ್ರತಿದಿನ ವರದಿಯಾಗುತ್ತಿರುವ ಹೊಸ ಪ್ರಕರಣಗಳ ಸಂಖ್ಯೆ ಸುಮಾರು 1000ದ ಆಸುಪಾಸಿನಲ್ಲಿದೆ. ಪಾಸಿಟಿವಿಟಿ ಪ್ರಮಾಣ ಶೇ 1ಕ್ಕಿಂತಲೂ ಕಡಿಮೆಯಿದೆ. ಆದರೆ ಇತ್ತೀಚೆಗೆ ಕೆಲ ರಾಜ್ಯಗಳಿಂದ ವರದಿಯಾಗುತ್ತಿರುವ ಸೋಂಕಿತರ ಸಂಖ್ಯೆ ಮತ್ತು ಪಾಸಿಟಿವಿಟಿ ಪ್ರಮಾಣ ಗಮನಾರ್ಹವಾಗಿ ಹೆಚ್ಚಾಗಿದೆ. ಕೊರೊನಾ ನಿಯಂತ್ರಣಕ್ಕೆ ತರುವಲ್ಲಿ ಈಗಾಗಲೇ ಸಾಧಿಸಿರುವ ಯಶಸ್ಸು ವಿಫಲವಾಗದಂತೆ ಇಂಥ ರಾಜ್ಯಗಳು ಕ್ರಮಕೈಗೊಳ್ಳಬೇಕು ಎಂದು ಪತ್ರದಲ್ಲಿ ಸೂಚಿಸಲಾಗಿದೆ.

ಇದನ್ನೂ ಓದಿ: CM Bommai Press Meet: ಯಾವುದೇ ಮೌಖಿಕ ಆದೇಶದ ಕಾಮಗಾರಿ ಮಾಡಬಾರದು, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆ

ದಿಂಗಾಲೇಶ್ವರ ಸ್ವಾಮೀಜಿ ನನ್ನ ಪರ ಮಾತಾಡಿದ್ದಕ್ಕೆ ಅಭಿನಂದನೆ; ಆದ್ರೆ ಕಮಿಷನ್ ಬಗ್ಗೆ ಆರೋಪಿಸುವ ಬದಲಿಗೆ ದಾಖಲೆ ನೀಡಲಿ -ಕೆ.ಎಸ್.ಈಶ್ವರಪ್ಪ





Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,591,112
Recovered
0
Deaths
528,655
Last updated: 9 minutes ago