Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

ಪ್ರವಾದಿ ಬಗ್ಗೆ ಅವಹೇಳನಕಾರಿ ಹೇಳಿಕೆಗೆ ವ್ಯಾಪಕ ಆಕ್ರೋಶ: ಬಿಜೆಪಿಯಿಂದ ನೂಪುರ್ ಶರ್ಮಾ, ನವೀನ್ ಜಿಂದಾಲ್ ಅಮಾನತು | BJP Suspends Nupur Sharma, Naveen Jindal After derogatory comments against Prophet Muhammad

Nupur.jpg


Nupur Sharma ಜ್ಞಾನವಾಪಿ ವಿಷಯದ ಕುರಿತು ಸುದ್ದಿವಾಹಿನಿಯ ಚರ್ಚೆಯಲ್ಲಿ ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಶೇಖ್ ದೂರಿದ್ದರು. ಇದಲ್ಲದೆ, ಜಿಂದಾಲ್ ದೇಶದ ಹಿತಾಸಕ್ತಿ ವಿರುದ್ಧ ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ

ದೆಹಲಿ: ಪ್ರವಾದಿ ಮೊಹಮ್ಮದ್ ಮತ್ತು ಅವರ ಪತ್ನಿಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ವ್ಯಾಪಕ ಆಕ್ರೋಶಕ್ಕೆ ಕಾರಣರಾಗಿದ್ದ ಬಿಜೆಪಿ ವಕ್ತಾರರಾದ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಭಾನುವಾರ ಅಮಾನತು ಮಾಡಲಾಗಿದೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಮುಂಬೈ ಪೊಲೀಸರು ರಾಝಾ ಅಕಾಡೆಮಿಯ ಮುಂಬೈ ವಿಭಾಗದ ಜಂಟಿ ಕಾರ್ಯದರ್ಶಿ ಇರ್ಫಾನ್ ಶೇಖ್ ಅವರ ದೂರಿನ ಆಧಾರದ ಮೇಲೆ ಶರ್ಮಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಜ್ಞಾನವಾಪಿ ವಿಷಯದ ಕುರಿತು ಸುದ್ದಿವಾಹಿನಿಯ ಚರ್ಚೆಯಲ್ಲಿ ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಶೇಖ್ ದೂರಿದ್ದರು. ಇದಲ್ಲದೆ, ಜಿಂದಾಲ್ ದೇಶದ ಹಿತಾಸಕ್ತಿ ವಿರುದ್ಧ ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.ಶರ್ಮಾ ಮತ್ತು ಜಿಂದಾಲ್ ಹೇಳಿಕೆಗಳ ನಂತರ ಗಲ್ಫ್ ರಾಷ್ಟ್ರಗಳ ಹಲವಾರು ಟ್ವಿಟರ್ ಬಳಕೆದಾರರು ಭಾರತದಲ್ಲಿ ತಯಾರಿಸಿದ ಉತ್ಪನ್ನಗಳನ್ನು ಬಹಿಷ್ಕರಿಸಲು ಕರೆ ನೀಡಿದ್ದರು. ಕೆಲವು ಟ್ವಿಟರ್ ಬಳಕೆದಾರರು, “ಇಂತಹ ನಾಯಕರನ್ನು ತಕ್ಷಣವೇ ಜೈಲಿಗೆ ಕಳುಹಿಸಬೇಕು, ಇಲ್ಲದಿದ್ದರೆ ನಾವು ಅವರನ್ನು ಬಂಧಿಸಲು ಬೀದಿಗಿಳಿಯುತ್ತೇವೆ” ಎಂದು ಬರೆದಿದ್ದಾರೆ.

(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)





Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,591,112
Recovered
0
Deaths
528,655
Last updated: 6 minutes ago