Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

ಚಾಮರಾಜಪೇಟೆ ಮೈದಾನ ವಿವಾದಕ್ಕೆ ಮತ್ತೊಂದು ಟ್ವಿಸ್ಟ್; ಮೈದಾನದ ಮೂಲ ದಾಖಲಾತಿಗಳು ಬಿಬಿಎಂಪಿ ಬಳಿ ಇಲ್ಲವಂತೆ! ಮುಂದೇನು? | Another twist to the Chamrajpet edga ground controversy BBMP lost Original registrations of the ground

chamrajpet-edga.jpg


ಚಾಮರಾಜಪೇಟೆ ಮೈದಾನ ವಿವಾದಕ್ಕೆ ಮತ್ತೊಂದು ಟ್ವಿಸ್ಟ್; ಮೈದಾನದ ಮೂಲ ದಾಖಲಾತಿಗಳು ಬಿಬಿಎಂಪಿ ಬಳಿ ಇಲ್ಲವಂತೆ! ಮುಂದೇನು?

ಈದ್ಗಾ ಮೈದಾನ

ಮೈದಾನದ ವಿಚಾರವಾಗಿ ಈ ಹಿಂದೆ ಯಾರೋ ಖಾಸಗಿ ವ್ಯಕ್ತಿ ಇದು ನನ್ನ ಜಾಗ ಎಂದು ಸುಪ್ರಿಂ ಕೋರ್ಟ್ ಮೊರೆ ಹೋಗಿದ್ದರು. ಆಗ ಸುಪ್ರಿಂ ಕೋರ್ಟ್ ವರ್ಷದಲ್ಲಿ ಎರಡು ದಿನ ಪ್ರಾರ್ಥನೆಗೆ ಅವಕಾಶ ನೀಡಲು ಸೂಚಿಸಿದೆ. ಈ ಮೈದಾನದ ಮೂಲ ದಾಖಲೆಗಳು ಬಿಬಿಎಂಪಿ ಬಳಿ ಇಲ್ಲ. ಸದ್ಯ ಬಿಬಿಎಂಪಿ ಜಂಟಿ ಆಯುಕ್ತರು, ಸರ್ವೆ ಇಲಾಖೆಗೆ ತೆರಳಿ ಮೂಲ ದಾಖಲೆ ಹುಡುಕುವ ಕೆಲಸ ಮಾಡುತ್ತಿದ್ದಾರೆ.

ಬೆಂಗಳೂರು: ಚಾಮರಾಜಪೇಟೆ ಮೈದಾನ ವಿಚಾರ( Chamrajpet Edga Ground Controversy) ದಿನದಿಂದ ದಿನಕ್ಕೆ ತಾರಕ್ಕೇರುತ್ತಿದೆ. ಮೊನ್ನೆ ಸ್ಥಳೀಯರು ಮತ್ತು ಪೊಲೀಸರ ನಡುವೆ ಕಾಳಗ ನಡೆದಿತ್ತು. ಇದೀಗ ಹಿಂದೂಪರ ಸಂಘಟನೆ, ಮೈದಾನ ವಿಚಾರವಾಗಿ ಪಾಲಿಕೆಗೆ ಡೆಡ್ ಲೈನ್ ಕೊಟ್ಟಿದ್ದು, ಇದೀಗ ಚಾಮರಾಜಪೇಟೆ ಮೈದಾನ ವಿವಾದಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಮೈದಾನದ ಮೂಲ ದಾಖಲಾತಿಗಳು ಬಿಬಿಎಂಪಿ ಬಳಿ ಇಲ್ಲ.

ಮೈದಾನದ ವಿಚಾರವಾಗಿ ಈ ಹಿಂದೆ ಯಾರೋ ಖಾಸಗಿ ವ್ಯಕ್ತಿ ಇದು ನನ್ನ ಜಾಗ ಎಂದು ಸುಪ್ರಿಂ ಕೋರ್ಟ್ ಮೊರೆ ಹೋಗಿದ್ದರು. ಆಗ ಸುಪ್ರಿಂ ಕೋರ್ಟ್ ವರ್ಷದಲ್ಲಿ ಎರಡು ದಿನ ಪ್ರಾರ್ಥನೆಗೆ ಅವಕಾಶ ನೀಡಲು ಸೂಚಿಸಿದೆ. ಈ ಮೈದಾನದ ಮೂಲ ದಾಖಲೆಗಳು ಬಿಬಿಎಂಪಿ ಬಳಿ ಇಲ್ಲ. ಸದ್ಯ ಬಿಬಿಎಂಪಿ ಜಂಟಿ ಆಯುಕ್ತರು, ಸರ್ವೆ ಇಲಾಖೆಗೆ ತೆರಳಿ ಮೂಲ ದಾಖಲೆ ಹುಡುಕುವ ಕೆಲಸ ಮಾಡುತ್ತಿದ್ದಾರೆ. ಮೈದಾನದಲ್ಲಿ ಕಾರ್ಯಕ್ರಮ ಮಾಡುವವರು ಮನವಿ ಪತ್ರ ನೀಡಲಿ. ಬಿಬಿಎಂಪಿ, ಪೊಲೀಸ್ ಇಲಾಖೆ ಜೊತೆ ಸಭೆ ನಡೆಸಿ ಅಂತಿಮ ತೀರ್ಮಾನ ಮಾಡಲಾಗುವುದು. ಆದರೆ ಇಂದೇ ಕಾರ್ಯಕ್ರಮಕ್ಕೆ ಅನುಮತಿ ನೀಡುವುದು ಅನುಮಾನ. ಹೀಗಾಗಿ ಮೂಲ ದಾಖಲೆ ಪತ್ರ ಸಿಕ್ಕ ಬಳಿಕ ಅನುಮತಿ ವಿಚಾರ ಚರ್ಚೆಯಾಗಲಿದೆ. ಇದನ್ನೂ ಓದಿ: ಚಿಕ್ಕಮಗಳೂರು: ಮುಸ್ಲಿಮರು ಪೂಜಿಸುತ್ತಿದ್ದ ದೇವರಕಟ್ಟೆಗೆ ಬೆಂಕಿ, ಕುರಾನ್, ಪೂಜಾ ಸಾಮಗ್ರಿಗಳಿಗೆ ಹಾನಿ

ಸ್ವಾತಂತ್ರ್ಯೋತ್ಸವಕ್ಕೆ ಅವಕಾಶ ಕೊಡದಿದ್ರೆ ಕೋರ್ಟ್ ಮೊರೆ?
ಹಿಂದೂಪರ ಸಂಘಟನೆಗಳು ಬಿಬಿಎಂಪಿಗೆ ನೀಡಿರುವ ಡೆಡ್‌ಲೈನ್ ಮುಗಿಯಲು ಕೌಂಟ್‌ಡೌನ್ ಶುರುವಾಗಿದೆ. ಯಾಕಂದ್ರೆ ಚಾಮರಾಜಪೇಟೆ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಅವಕಾಶ ನೀಡುವಂತೆ ಈಗಾಗಲೇ ಮನವಿ ಸಲ್ಲಿಸಲಾಗಿತ್ತು. ಇದೀಗ ಮತ್ತೆ ಮಧ್ಯಾಹ್ನ 3 ಗಂಟೆಯ ಒಳಗೆ ನಿಲುವು ತಿಳಿಸಬೇಕೆಂದು ಕೋರಿ ಹಿಂದೂಪರ ಸಂಘಟನೆಗಳು ಬಿಬಿಎಂಪಿಗೆ ಡೆಡ್‌ಲೈನ್ ಕೊಟ್ಟಿವೆ.

ಜೂನ್ 7ರಂದು ಹಿಂದೂಪರ ಸಂಘಟನೆಗಳು, ಈದ್ಗಾ ಮೈದಾನದಲ್ಲಿ ಆಗಸ್ಟ್ 14 ಮತ್ತು 15ರಂದು ಸ್ವಾತಂತ್ರ್ಯ ದಿನಾಚರಣೆಗೆ ಅವಕಾಶ ಕೋಡಬೇಕು ಅಂತಾ ಬಿಬಿಎಂಪಿಗೆ ಮನವಿ ಮಾಡಿದ್ವು. ಆದ್ರೆ ಇದುವರೆಗೂ ಬಿಬಿಎಂಪಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹಾಗಾಗಿ ಮೂರು ಗಂಟೆಯೊಳಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡುವಂತೆ ಪಟ್ಟುಹಿಡಿದಿವೆ. ಒಂದು ವೇಳೆ ಸ್ವಾತಂತ್ರ್ಯ ದಿನಾಚರಣೆಗೆ ಅವಕಾಶ ಕೊಡದಿದ್ದರೆ, ನ್ಯಾಯಾಲಯದ ಮೊರೆ ಹೋಗುವುದಾಗಿ ವಿಶ್ವ ಸನಾತನ ಪರಿಷತ್ ಅಧ್ಯಕ್ಷ ಎಸ್. ಭಾಸ್ಕರನ್ ಎಚ್ಚರಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ



Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,591,112
Recovered
0
Deaths
528,655
Last updated: 9 minutes ago