Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

IND vs SA 5th T20I: ಭಾರತ-ಸೌತ್ ಆಫ್ರಿಕಾ ಪಂದ್ಯ ರದ್ದು | IND vs SA 5th T20I: Here are rules to determine winner if it pours

Untitled2-19.jpg


IND vs SA 5th T20I: ಓವರ್​ ಕಡಿತದೊಂದಿಗೆ ಪಂದ್ಯ ಮುಂದುವರೆಯಬಹುದು. ಇತ್ತ ಮಳೆ ಬಂದರೂ ಮೈದಾನದಿಂದ ನೀರು ಹೊರಹೋಗಲು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉತ್ತಮ ವ್ಯವಸ್ಥೆಯಿದೆ. ಹೀಗಾಗಿ ತಡವಾಗಿ ಪಂದ್ಯ ನಡೆಯುವ ಸಾಧ್ಯತೆಯಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ಸೌತ್ ಆಫ್ರಿಕಾ ನಡುವಣ ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಟಾಸ್​ಗೂ ಮುನ್ನ ಮಳೆಯಾಗಿದ್ದರಿಂದ ಪಂದ್ಯವು ವಿಳಂಬವಾಗಿ ಶುರುವಾಗಿತ್ತು. ಅದರಂತೆ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡವು ಬೌಲಿಂಗ್ ಆಯ್ದುಕೊಂಡಿದೆ. ಇನ್ನು ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಗಿದೆ. ಲುಂಗಿ ಎನ್​ಗಿಡಿ ಎಸೆದ 2ನೇ ಓವರ್​ನ ಕೊನೆಯ ಎಸೆತದಲ್ಲಿ ಇಶಾನ್ ಕಿಶನ್ (15) ಕ್ಲೀನ್ ಬೌಲ್ಡ್ ಆಗಿ ಹೊರನಡೆದರೆ, ಎನ್​ಗಿಡಿ ಎಸೆದ 4ನೇ ಓವರ್​ನ 2ನೇ ಎಸೆತದಲ್ಲಿ ರುತುರಾಜ್ ಗಾಯಕ್ವಾಡ್ (10) ಕ್ಯಾಚ್ ನೀಡಿ ನಿರ್ಗಮಿಸಿದರು. ಈ ವೇಳೆ ಮತ್ತೆ ಮಳೆ ಸುರಿಯಲಾರಂಭಿಸಿದ ಕಾರಣ ಪಂದ್ಯವನ್ನು ಸ್ಥಗಿತಗೊಳಿಸಲಾಗಿದೆ. ಸದ್ಯ ಟೀಮ್ ಇಂಡಿಯಾ 3.3 ಓವರ್​ಗಳಲ್ಲಿ 28 ರನ್​ಗಳಿಸಿ 2 ವಿಕೆಟ್ ಕಳೆದುಕೊಂಡಿದೆ. ಕ್ರೀಸ್​ನಲ್ಲಿ ಶ್ರೇಯಸ್ ಅಯ್ಯರ್ ಹಾಗೂ ರಿಷಭ್ ಪಂತ್ ಇದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಇನ್ನೂ ಕೂಡ ಮಳೆ ನಿಂತಿಲ್ಲ. ಹೀಗಾಗಿ ಪಂದ್ಯ ಆರಂಭವಾಗುವುದು ಮತ್ತಷ್ಟು ತಡವಾಗಲಿದೆ. ಅದರಂತೆ ಓವರ್​ ಕಡಿತದೊಂದಿಗೆ ಪಂದ್ಯ ಮುಂದುವರೆಯಬಹುದು. ಇತ್ತ ಮಳೆ ಬಂದರೂ ಮೈದಾನದಿಂದ ನೀರು ಹೊರಹೋಗಲು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉತ್ತಮ ವ್ಯವಸ್ಥೆಯಿದೆ. ಹೀಗಾಗಿ ತಡವಾಗಿ ಪಂದ್ಯ ನಡೆಯುವ ಸಾಧ್ಯತೆಯಿದೆ.

ಆದರೆ 10 ಗಂಟೆಯ ಬಳಿಕ ಮಳೆ ನಿಂತರೆ 5 ಓವರ್​ಗಳ ಪಂದ್ಯ ನಡೆಯಬಹುದು. ಇದಕ್ಕಿಂತ ಕಡಿಮೆ ಓವರ್​ಗಳ ಪಂದ್ಯ ನಡೆಸುವುದಿಲ್ಲ. ಅಂದರೆ ಇಲ್ಲಿ ಒಂದು ತಂಡವು 5 ಓವರ್​ಗಳನ್ನು ಆಡಲೇಬೇಕು. ಒಂದು ವೇಳೆ ಮೊದಲು ಬ್ಯಾಟ್ ಮಾಡಿದ ತಂಡ 5 ಓವರ್​ ಆಡಿದ ಬಳಿಕ ಮಳೆ ಬಂದರೆ ಡಕ್​ವರ್ಥ್ ಲೂಯಿಸ್ ನಿಯಮದ ಪ್ರಕಾರ ಗುರಿ ನಿಗದಿಪಡಿಸಬಹುದು. ಅದರಂತೆ ಐದಕ್ಕಿಂತ ಕಡಿಮೆ ಓವರ್​ನಲ್ಲಿ ಟಾರ್ಗೆಟ್ ನಿಗದಿ ಮಾಡಬಹುದು. ಇದಾಗ್ಯೂ ಸೂಪರ್ ಓವರ್​ ಮೂಲಕ ಸರಣಿ ಫಲಿತಾಂಶವನ್ನು ನಿರ್ಧರಿಸಲಾಗುವುದಿಲ್ಲ.

ಇನ್ನು ಮಳೆ ನಿಲ್ಲದಿದ್ದರೆ ಪಂದ್ಯವನ್ನು ರದ್ದುಗೊಳಿಸಲಾಗುತ್ತದೆ. ಇದಾಗ್ಯೂ ಈ ಪಂದ್ಯಕ್ಕೆ ಮೀಸಲು ದಿನ ಇರುವುದಿಲ್ಲ. ಹಾಗಾಗಿ ಪಂದ್ಯ ನಾಳೆ ನಡೆಯುವುದಿಲ್ಲ. ಬದಲಾಗಿ ಸರಣಿಯು ಸಮಬಲದೊಂದಿಗೆ ಅಂತ್ಯವಾಗಲಿದೆ. ಅಂದರೆ ಐದು ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು 2-2 ಸಮಬಲ ಸಾಧಿಸಿದ್ದು, ಅದರಂತೆ ಉಭಯ ತಂಡಗಳನ್ನು ಸರಣಿ ವಿಜೇತರೆಂದು ಘೋಷಿಸಲಾಗುತ್ತದೆ.

ಟೀಮ್ ಇಂಡಿಯಾ:
ರಿಷಬ್ ಪಂತ್ (ನಾಯಕ), ಇಶಾನ್ ಕಿಶನ್, ರಿತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್ ಮತ್ತು ಯುಜುವೇಂದ್ರ ಚಾಹಲ್Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,594,487
Recovered
0
Deaths
528,673
Last updated: 3 minutes ago