Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

ದೆಹಲಿಯತ್ತ ದೌಡಾಯಿಸಿದ ಕಾಂಗ್ರೆಸ್ ನಾಯಕರು; ರಾಹುಲ್ ಗಾಂಧಿ ನಿರಂತರ ಇಡಿ ವಿಚಾರಣೆ, ಅಗ್ನಿಪಥ್ ಖಂಡಿಸಿ ನಾಳೆ ಬೃಹತ್ ಪ್ರತಿಭಟನೆ | Congress Leaders MLC runs to delhi over high command call for protest

Siddaramaiah.jpg


ದೆಹಲಿಯತ್ತ ದೌಡಾಯಿಸಿದ ಕಾಂಗ್ರೆಸ್ ನಾಯಕರು; ರಾಹುಲ್ ಗಾಂಧಿ ನಿರಂತರ ಇಡಿ ವಿಚಾರಣೆ, ಅಗ್ನಿಪಥ್ ಖಂಡಿಸಿ ನಾಳೆ ಬೃಹತ್ ಪ್ರತಿಭಟನೆ

ಸಿದ್ದರಾಮಯ್ಯ

ನಾಳೆ ದೆಹಲಿಯಲ್ಲಿ ಅಗ್ನಿಪಥ್ ಯೋಜನೆ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದ್ದು ರಾಜ್ಯ ಕಾಂಗ್ರೆಸ್ನ ಎಲ್ಲಾ ಶಾಸಕರು ಖುದ್ದು ಹಾಜರಾಗಲು ಹೈಕಮಾಂಡ್ ಸೂಚಿಸಿದ್ದಾರೆ. ದೆಹಲಿಯಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗೆ ಕಾಂಗ್ರೆಸ್ ಸಜ್ಜಾಗಿದೆ. ದೇಶದ ಎಲ್ಲಾ ಭಾಗಗಳ ‘ಕೈ’ ಶಾಸಕರಿಗೆ ಎಐಸಿಸಿ ಬುಲಾವ್ ನೀಡಿದೆ ಎಂಬ ಮಾಹಿತಿ ಸಿಕ್ಕಿದೆ.

ದೆಹಲಿ: ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಸಂಜೆ 7 ಗಂಟೆಗೆ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ. ಸಿದ್ದರಾಮಯ್ಯ ಜೊತೆ ಕಾಂಗ್ರೆಸ್ನ ಎಲ್ಲಾ MLCಗಳು ದೆಹಲಿಯತ್ತ ದೌಡಾಯಿಸಲಿದ್ದಾರೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನವದೆಹಲಿಗೆ ತೆರಳಿದ್ದಾರೆ. ಕಾಂಗ್ರೆಸ್ನ ವಿಧಾನ ಪರಿಷತ್ ಸದಸ್ಯರಿಗೆ ಇಂದು ಸಂಜೆಯೊಳಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಸೂಚನೆ ನೀಡಿದೆ. ಹೀಗಾಗಿ ಕಾಂಗ್ರೆಸ್ ನಾಯಕರು ಎದ್ನೋ ಬಿದ್ನೋ ಅಂತ ದೆಹಲಿಯತ್ತ ಮುಖ ಮಾಡಿದ್ದಾರೆ. ನಾಳೆ ದೆಹಲಿಯಲ್ಲಿ ಅಗ್ನಿಪಥ್ ಯೋಜನೆ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದ್ದು ರಾಜ್ಯ ಕಾಂಗ್ರೆಸ್ನ ಎಲ್ಲಾ ಶಾಸಕರು ಖುದ್ದು ಹಾಜರಾಗಲು ಹೈಕಮಾಂಡ್ ಸೂಚಿಸಿದ್ದಾರೆ. ದೆಹಲಿಯಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗೆ ಕಾಂಗ್ರೆಸ್ ಸಜ್ಜಾಗಿದೆ. ದೇಶದ ಎಲ್ಲಾ ಭಾಗಗಳ ‘ಕೈ’ ಶಾಸಕರಿಗೆ ಎಐಸಿಸಿ ಬುಲಾವ್ ನೀಡಿದೆ ಎಂಬ ಮಾಹಿತಿ ಸಿಕ್ಕಿದೆ.

ಇನ್ನು ಮತ್ತೊಂದು ಕಡೆ ರಾಹುಲ್ ಗಾಂಧಿ ನಿರಂತರ ಇಡಿ ವಿಚಾರಣೆ ಖಂಡಿಸಿ ನಾಳೆ ಪ್ರತಿಭಟನೆ ಮತ್ತಷ್ಟು ತೀವ್ರಗೊಳಿಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ದೇಶದ ಎಲ್ಲ ಪಿಸಿಸಿ ಅಧ್ಯಕ್ಷರನ್ನು ದೆಹಲಿಗೆ ಕರೆದು ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗೆ ಪ್ಲ್ಯಾನ್ ಮಾಡಲಾಗಿದೆ. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಕೊಡೆಯುವ ತಂತ್ರ ರೂಪಿಸಿದೆ. ಇದನ್ನೂ ಓದಿ: ಮೋದಿ ಕರ್ನಾಟಕ ಭೇಟಿ ಬೆನ್ನಲ್ಲೇ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿದ ಮಾಜಿ ಸಿಎಂ ಯಡಿಯೂರಪ್ಪ

ಅಗ್ನಿಪಥ್ ವಿರೋಧಿಸಿ ಪ್ರತಿಭಟನೆ: ದೇಶದ ವಿವಿಧೆಡೆ 1000 ಮಂದಿ ಬಂಧನ
ಮಿಲಿಟರಿ ನೇಮಕಾತಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಅಗ್ನಿಪಥ್ ಯೋಜನೆ (Agnipath Scheme) ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿವೆ. ವಿವಿಧ ರಾಜ್ಯಗಳ ಪೊಲೀಸರು ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ತೊಡಗಿಸಿಕೊಂಡ ಸುಮಾರು 1,000 ಮಂದಿಯನ್ನು ಬಂಧಿಸಿದ್ದಾರೆ. ಬಿಹಾರದಲ್ಲಿಯೇ (Bihar) ಹೆಚ್ಚಿನ ಸಂಖ್ಯೆಯ ಜನರನ್ನು ಬಂಧಿಸಲಾಗಿದೆ. ಪ್ರತಿಭಟನೆಯ ವಿಡಿಯೊ ಫೂಟೇಜ್​ಗಳನ್ನು ಗಮನಿಸಿ, ಹಿಂಸಾಚಾರ ಎಸಗಿದವರನ್ನು ಪೊಲೀಸರು ಗುರುತಿಸುತ್ತಿದ್ದಾರೆ. ಅಗ್ನಿಪಥ್ ಯೋಜನೆ ವಿರೋಧಿಸಿ ನಡೆದ ಪ್ರತಿಭಟನೆಗಳ ತೀವ್ರತೆ ಬಿಹಾರದಲ್ಲಿ ಹೆಚ್ಚಾಗಿದೆ. ಹಲವು ಜಿಲ್ಲೆಗಳಲ್ಲಿ ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮಾಡಲಾಗಿದೆ. ರೈಲುಗಳಿಗೂ ಬೆಂಕಿ ಹಚ್ಚಲಾಗಿದೆ. ಬಿಹಾರದ 805 ಮಂದಿಯ ವಿರುದ್ಧ 148 ಎಫ್​ಐಆರ್​ ದಾಖಲಾಗಿದೆ.

ಪ್ರತಿಭಟನೆಯ ಹೆಸರಿನಲ್ಲಿ ಸಾರ್ವಜನಿಕ ಆಸ್ತಿ ಹಾಳು ಮಾಡುವವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು. ಇಂಥವರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಬಿಹಾರದ ಹೆಚ್ಚುವರಿ ಗೃಹ ಕಾರ್ಯದರ್ಶಿ ಚೈತನ್ಯ ಪ್ರಸಾದ್ ಹೇಳಿದರು. ದುಷ್ಕೃತ್ಯ ಎಸಗಿದವರನ್ನು ಗುರುತಿಸಿ, ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ತಾರೆಗಾಣ ರೈಲು ನಿಲ್ದಾಣದಲ್ಲಿ ಕಲ್ಲುತೂರಾಟ ನಡೆಸಿದ ಆರೋಪದ ಮೇಲೆ ಮಸೌರ್​ಹಿ ಪಟ್ಟಣದ ಕೋಚಿಂಗ್ ಕೇಂದ್ರಗಳ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಹಿಂಸಾಚಾರ ಎಸಗಿದ ಆರೋಪದ ಮೇಲೆ ಪೊಲೀಸರು ಜಿಲ್ಲೆಯಲ್ಲಿ 191 ಮಂದಿಯನ್ನು ಬಂಧಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: Video Viral: ಬಾಣಲೆಯ ಹೊಡೆತಕ್ಕೆ ಹಿಮ್ಮೆಟ್ಟಿದ ಮೊಸಳೆ

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ



Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,591,112
Recovered
0
Deaths
528,655
Last updated: 4 minutes ago