Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

Award : ಹಿರಿಯ ಲೇಖಕ ಡಾ. ಗುರುಲಿಂಗ ಕಾಪಸೆ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿ | Kannada Writer Guruling Kapase bagged Central Sahitya Academy Award for Translation

kapse-.jpg


Award : ಹಿರಿಯ ಲೇಖಕ ಡಾ. ಗುರುಲಿಂಗ ಕಾಪಸೆ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿ

ಡಾ. ಗುರುಲಿಂಗ ಕಾಪಸೆ

Kendra Sahitya Akademi : ಡಾ. ಗುರುಲಿಂಗ ಕಾಪಸೆ ಅವರು ಮರಾಠಿಯಿಂದ ಕನ್ನಡಕ್ಕೆ ಅನುವಾದಿಸಿದ ವಿ. ಸ. ಖಾಂಡೇಕರ್ ಅವರ ‘ಒಂದು ಪುಟದ ಕಥೆ’ ಯು ಈ ಸಲದ ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿಗೆ ಭಾಜನವಾಗಿದೆ.

ನವದೆಹಲಿ : ಕೇಂದ್ರ ಸಾಹಿತ್ಯ ಅಕಾಡೆಮಿಯು ನೀಡುವ ಅನುವಾದ ಪುಸ್ತಕ ಪ್ರಶಸ್ತಿಗೆ ಹಿರಿಯ ಲೇಖಕರಾದ ಡಾ. ಗುರುಲಿಂಗ ಕಾಪಸೆ ಅವರು ಭಾಜನರಾಗಿದ್ದಾರೆ. ಕಾಪಸೆ ಅವರು ಮರಾಠಿಯಿಂದ ಕನ್ನಡಕ್ಕೆ ಅನುವಾದಿಸಿದ ವಿ. ಸ. ಖಾಂಡೇಕರ್ ಅವರ ‘ಒಂದು ಪುಟದ ಕಥೆ’ ಯು ಈ ಸಲದ ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿಗೆ ಭಾಜನವಾಗಿದೆ. ‘ಒಂದು ಪುಟದ ಕಥೆ’ (ಮೂಲದಲ್ಲಿ ‘ಏಕಾ ಪಾನಾಚಿ ಗೋಷ್ಠ)ಯು ಖಾಂಡೇಕರ್ ಅವರ ಆತ್ಮಕಥೆ.
ಖಾಂಡೇಕರ್ ಅವರು ಮರಾಠಿಯ ಮೊದಲ ಜ್ಞಾನಪೀಠ ಪ್ರಶಸ್ತಿ ಪಡೆದ ಲೇಖಕರು. ಅವರ ‘ಯಯಾತಿ ‘ ಎಂಬ ಕೃತಿಗೆ ಜ್ಞಾನಪೀಠ ಪ್ರಶಸ್ತಿಯು ಬಂದಿತ್ತು. ಖಾಂಡೇಕರ್ ಅವರ ಆತ್ಮಕಥೆಯು ಕಳೆದ ಶತಮಾನದ ಭಾರತದ ಅದರಲ್ಲಿಯೂ ಮಹಾರಾಷ್ಟದ ಕೊಂಕಣ ಭಾಗದ ಸಾಮಾಜಿಕ, ಆರ್ಥಿಕ, ರಾಜಕೀಯ, ಜಾತೀಯ ಸ್ಥಿತಿಗತಿಗಳ ಸಮಗ್ರವಾದ ವಿವರಣೆ ನೀಡುತ್ತದೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ವಿಭಾಗದ ಸಂಚಾಲಕರಾಗಿರುವ ಡಾ. ಸರಜೂ ಕಾಟ್ಕರ್ ಅವರ ನೇತೃತ್ವದಲ್ಲಿ ನಡೆದ ಅನುವಾದ ಸಾಹಿತ್ಯ ಪ್ರಶಸ್ತಿ ಆಯ್ಕೆ ಸಮಿತಿಯು ಡಾ. ಕಾಪಸೆಯವರು ಅನುವಾದಿಸಿದ ಈ ಕೃತಿಯನ್ನು ಪ್ರಶಸ್ತಿಗೆ ಆಯ್ಕೆಮಾಡಿದೆ. ಆಯ್ಕೆ ಸಮಿತಿಯ ತೀರ್ಪುಗಾರರಾಗಿ ಹಿರಿಯ ಲೇಖಕರಾದ ಡಾ ಬಸವರಾಜ ಕಲ್ಗುಡಿ, ಕವಿಗಳಾದ ಬಿ. ಆರ್. ಲಕ್ಷ್ಮಣರಾವ್ ಹಾಗೂ ಡಾ ಸುಬ್ಬು ಹೊಲಿಯಾರ್ ಇದ್ದರು. ಪ್ರಶಸ್ತಿ ಪ್ರದಾನ ಸಮಾರಂಭವು ಆಗಸ್ಟ್‌ ಅಥವಾ ಸೆಪ್ಟೆಂಬರ್ ತಿಂಗಳಲ್ಲಿ ದಿಲ್ಲಿಯಲ್ಲಿ ನೆರವೇರಲಿದೆ. ಪ್ರಶಸ್ತಿಯು 50,000 ರುಪಾಯಿ , ಸ್ಮೃತಿ ಫಲಕ, ಶಾಲು ಸನ್ಮಾನ ಒಳಗೊಂಡಿರುತ್ತದೆ.

(ಇನ್ನಷ್ಟು ಮಾಹಿತಿಗಾಗಿ ನಿರೀಕ್ಷಿಸಿ)

ಇದನ್ನೂ ಓದಿ





Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,575,473
Recovered
0
Deaths
528,562
Last updated: 9 minutes ago