Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

Asus ROG Phone 6: ಏಸಸ್ ರಾಗ್ ಫೋನ್ 6, 6 ಪ್ರೊ ಬಿಡುಗಡೆಗೆ ಡೇಟ್ ಫಿಕ್ಸ್: ಕಾದು ಕುಳಿತಿದ್ದಾರೆ ಟೆಕ್ ಪ್ರಿಯರು | Asus is all set to launch its next gaming phone ROG Phone 6 and ROG Phone 6 Pro in India on July 5

Asus-ROG-Phone-6-ROG-Phone-6-Pro.jpg


Asus ROG Phone 6: ಏಸಸ್ ರಾಗ್ ಫೋನ್ 6, 6 ಪ್ರೊ ಬಿಡುಗಡೆಗೆ ಡೇಟ್ ಫಿಕ್ಸ್: ಕಾದು ಕುಳಿತಿದ್ದಾರೆ ಟೆಕ್ ಪ್ರಿಯರು

Asus ROG Phone 6, ROG Phone 6 Pro

Asus ROG Phone 6 Pro: ಏಸಸ್ ಇದೀಗ ಹೊಸದಾಗಿ ರಾಗ್ ಫೋನ್ 6 ಸರಣಿಯನ್ನು ಭಾರತದಲ್ಲಿ ಪರಿಚಯಿಸಲು ಮುಂದಾಗಿದೆ. ಇದರಲ್ಲಿ ಒಟ್ಟು ಎರಡು ಫೋನ್​ಗಳಿದ್ದು ಏಸಸ್ ರಾಗ್ ಫೋನ್ 6 ಮತ್ತು ರಾಗ್ ಫೋನ್ 6 ಪ್ರೊ ಅನ್ನು ದೇ ಜುಲೈ 5 ರಂದು ದೇಶದಲ್ಲಿ ಅನಾವರಣ ಮಾಡಲಿದೆ.

ಗೇಮಿಂಗ್ ಪ್ರಿಯರ ನೆಚ್ಚಿನ ಸ್ಮಾರ್ಟ್​ಫೋನ್ ಬ್ರ್ಯಾಂಡ್ ಏಸಸ್ (Asus) ಸದ್ಯ ಹೊಸ ಮೊಬೈಲ್​ನೊಂದಿಗೆ ಮತ್ತೆ ಬಂದಿದೆ. ಕಂಪ್ಯೂಟರ್ ಗೇಮಿಂಗ್ ವೈಶಿಷ್ಟ್ಯಗಳನ್ನು ಸ್ಮಾರ್ಟ್​ಫೋನ್​ಗಳಲ್ಲಿ ಪರಿಚಯಿಸಿ ಸೈ ಎನಿಸಿರುವ ಏಸಸ್ ಇದೀಗ ಹೊಸದಾಗಿ ರಾಗ್ ಫೋನ್ 6 ಸರಣಿಯನ್ನು ಭಾರತದಲ್ಲಿ ಪರಿಚಯಿಸಲು ಮುಂದಾಗಿದೆ. ಇದರಲ್ಲಿ ಒಟ್ಟು ಎರಡು ಫೋನ್​ಗಳಿದ್ದು ಏಸಸ್ ರಾಗ್ ಫೋನ್ 6 ಮತ್ತು ರಾಗ್ ಫೋನ್ 6 ಪ್ರೊ (Asus ROG Phone 6 and ROG Phone 6 Pro) ಅನ್ನು ದೇ ಜುಲೈ 5 ರಂದು ದೇಶದಲ್ಲಿ ಅನಾವರಣ ಮಾಡಲಿದೆ. ಈ ಎರಡೂ ಸ್ಮಾರ್ಟ್​ಫೋನ್​ಗಳು (Smartphone) 5G ಬೆಂಬಲ ಪಡೆದುಕೊಂಡಿದ್ದು ಏಸಸ್ ರಾಗ್ ಫೋನ್ 5 ಸರಣಿಯ ಮುಂದಿನ ಆವೃತ್ತಿಯಾಗಿದೆ. ಅಚ್ಚರಿಗೊಳ್ಳುವಂತಹ ಫೀಚರ್​ಗಳು ಈ ಹೊಸ ಫೋನ್​​ನಲ್ಲಿದ್ದು, ಟೆಕ್ ಪ್ರಿಯರಂತು ಕಾದುಕುಳಿತಿದ್ದಾರೆ.

ಏನು ಹೈಲೇಟ್?:

ಏಸಸ್​​​ ROG ಫೋನ್ 6 ಮತ್ತು ROG ಫೋನ್ 6 ಪ್ರೊ ಈ ಎರಡು ಸ್ಮಾರ್ಟ್‌ಫೋನ್‌ಗಳ ಬಗ್ಗೆ ಕಂಪನಿ ಅಧಿಕೃತ ಮಾಹಿತಿ ಇನ್ನೂ ಹೊರ ಹಾಕಿಲ್ಲ. ಆದರೆ, ROG ಫೋನ್ 6 ನಲ್ಲಿ ವಿಶ್ವದಲ್ಲಿಯೇ ಅತ್ಯಂತ ವೇಗವಾಗಿ ಕಾರ್ಯನಿರ್ವಹಿಸುವ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8+ Gen 1 ಪ್ರೊಸೆಸರ್‌ ಅನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಪ್ರೊಸೆಸರ್​ನಲ್ಲಿ ಏಸಸ್ ಭಾರತದಲ್ಲಿ ಬಿಡುಗಡೆ ಮಾಡುತ್ತಿರುವ ಮೊದಲ ಸ್ಮಾರ್ಟ್​​ಫೋನ್ ಆಗಿದೆ.

Arnav Sivram: 17 ಕಂಪ್ಯೂಟರ್ ಪ್ರೊಗ್ರಾಮಿಂಗ್ ಕಲಿತ 13 ವರ್ಷದ ತಮಿಳುನಾಡಿನ ಬಾಲಕ ಅರ್ನವ್

ಏಸಸ್​​​ ROG ಫೋನ್ 6 1,080×2,448 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.78 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿರುವ ಸಾಧ್ಯತೆ ಇದೆ. ಈ ಡಿಸ್‌ಪ್ಲೇ ಸ್ಯಾಮ್‌ಸಂಗ್‌ ಅಮೋಲೆಡ್‌ ಡಿಸ್‌ಪ್ಲೇ ಆಗಿದ್ದು, 165Hz ರಿಫ್ರೆಶ್ ರೇಟ್, 360Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿವೆ. ಇದಲ್ಲದೆ 1ms ರೆಸ್ಪಾನ್ಸ್‌ ಟೈಂ, 24ms ಟಚ್ ಲೇಟೆನ್ಸಿ, HDR10+ ಬೆಂಬಲ ಮತ್ತು 1200 ವರೆಗೆ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆಯಂತೆ. ಇದಲ್ಲದೆ ಈ ಎರಡೂ ಗೇಮಿಂಗ್ ಸ್ಮಾರ್ಟ್‌ಫೋನ್‌ಗಳು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಪಡೆದುಕೊಂಡಿವೆ.

ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8+ Gen 1 ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿರುವುದು ಖಚಿತವಾಗಿದೆ. 64GB RAM ಮತ್ತು 1TB ಸ್ಟೋರೇಜ್‌ ಅನ್ನು ಹೊಂದಿವೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಇರುವ ಸಾಧ್ಯತೆ ಇದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೋನಿ IMX686 ಸೆನ್ಸಾರ್‌, ಎರಡನೇ ಕ್ಯಾಮೆರಾ 13-ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್‌ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಪಡೆದಿದೆ. ಇದಲ್ಲದೆ 24 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಇದರಲಿದೆ ಎಂಬ ಮಾತಿದೆ.

ಏಸಸ್‌ ROG ಫೋನ್ 6 ಸ್ಮಾರ್ಟ್‌ಫೋನ್‌ ದೀರ್ಘ ಸಮಯ ಬಾಳಿಕೆ ಬರುವ 6,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 65W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಭಾರತದಲ್ಲಿ ಏಸಸ್‌ ROG ಫೋನ್ 6 ಮತ್ತು ಏಸಸ್‌ ROG ಫೋನ್ 6 ಪ್ರೊ ಸ್ಮಾರ್ಟ್‌ಫೋನ್‌ ಬೆಲೆ ಇನ್ನೂ ಬಹಿರಂಗವಾಗಿಲ್ಲ. ಇದು ಜುಲೈ 5 ರಂದು ಸಂಜೆ 5:30ಕ್ಕೆ ಬಿಡುಗಡೆ ಆಗಲಿದೆ.

ಇದನ್ನೂ ಓದಿ



Moto G42: ಭಾರತದಲ್ಲಿಂದು ಬಹುನಿರೀಕ್ಷಿತ ಮೋಟೋ G42 ಸ್ಮಾರ್ಟ್​​ಫೋನ್ ಬಿಡುಗಡೆ: ಬೆಲೆ ಎಷ್ಟು?



Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
0
Recovered
0
Deaths
0
Last updated: 9 minutes ago