Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

PSI Recruitment Scam: ಪಿಎಸ್​ಐ ನೇಮಕಾತಿ ಹಗರಣ, ಕೊಲೆಗಿಂತಲೂ ಗಂಭೀರ ಅಪರಾಧ ಎಂದ ಹೈಕೋರ್ಟ್​ | PSI Recruitment Scam: The High Court termed that PSI recruitment scam as a crime more serious than murder

New-Project-2022-07-14T173618.343.jpg


ಪಿಎಸ್​ಐ ನೇಮಕಾತಿ  ಹಗರಣಕ್ಕೆ  ಸಂಬಂಧಿಸಿದಂತೆ ಹೈಕೋರ್ಟ್​ ಇಂದು ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ನಡೆಸಿದೆ. ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ, ಇದು ಕೊಲೆಗಿಂತ ಗಂಭೀರವಾದ ಅಪರಾಧ.

ಪಿಎಸ್​ಐ ನೇಮಕಾತಿ  ಹಗರಣಕ್ಕೆ  ಸಂಬಂಧಿಸಿದಂತೆ ಹೈಕೋರ್ಟ್​ ಇಂದು ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ನಡೆಸಿದೆ. ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ, ಇದು ಕೊಲೆಗಿಂತ ಗಂಭೀರವಾದ ಅಪರಾಧ, ಕೊಲೆಯಾದರೆ ಒಬ್ಬ ಸಾವಿಗೀಡಾಗುತ್ತಾನೆ, ಇಲ್ಲಿ 50 ಸಾವಿರ ಅಭ್ಯರ್ಥಿಗಳು ತೊಂದರೆಗೀಡಾಗಿದ್ದಾರೆ ಎಂದು ನ್ಯಾ.ಹೆಚ್.ಪಿ.ಸಂದೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಕ್ರಮ ನೇಮಕಾತಿ ಸಮಾಜಕ್ಕೇ ಬಹು ದೊಡ್ಡ ಬೆದರಿಕೆಯಾಗಿದೆ. ಪ್ರತಿ ನೇಮಕದಲ್ಲೂ ಹೀಗೇ ಆದರೆ ಕೋರ್ಟ್ ಕಣ್ಮುಚ್ಚಿ ಕೂರಬೇಕೇ ಎಂದು ಪ್ರಶ್ನಿಸಿದ್ದಾರೆ. ಜು.20 ಕ್ಕೆ ತನಿಖಾ ಪ್ರಗತಿ ವಿವರ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿದೆ, ಪಿಎಸ್​ಐ ಅಭ್ಯರ್ಥಿಗಳು ವಿಸಿ ಮೂಲಕ ಮನವಿ ಸಲ್ಲಿಸಲು ಮುಂದಾಗಿದ್ದಾರೆ, ‌ಅರ್ಜಿ ಸಲ್ಲಿಸದೇ ವಿಸಿ ಮೂಲಕ ವಾದಮಂಡನೆ ಮಾಡುವಂತಿಲ್ಲ, ಅಭ್ಯರ್ಥಿಗಳ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಆರೋಪಿಗಳ ಕರೆ ವಿವರವನ್ನು ಪರಿಶೀಲಿಸಲಾಗುತ್ತಿದೆ, ಸಿಐಡಿ ಡಿಜಿಪಿ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ನಿರ್ಲಜ್ಜ ವ್ಯಕ್ತಿಗಳಿಂದ ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ, ಹೀಗಾಗಿ ಜಾಮೀನು ನೀಡದಂತೆ ಎಸ್​ಪಿಪಿ ವಿ.ಎಸ್.ಹೆಗ್ಡೆ ಮನವಿ ಮಾಡಿದ್ದಾರೆ.

ಮತ್ತಷ್ಟು ಓದಿ

ಪಿಎಸ್ಐ ಪರೀಕ್ಷಾ ನೇಮಕಾತಿ ಅಕ್ರಮ ಎಸಗಿರುವ ಆರೋಪದಡಿ ‌ಬಂಧಿತರಾಗಿರುವ ಐಪಿಎಸ್ ಅಧಿಕಾರಿ ಅಮ್ರಿತ್ ಪೌಲ್ ಬುಧವಾರ ಕಸ್ಟಡಿ ಅಂತ್ಯ ಹಿನ್ನೆಲೆ ಇಂದು ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಹಾಜರುಪಡಿಸಿ ಮತ್ತೆ ಮೂರು ದಿನಗಳವರೆಗೆ ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ.

ಪಿಎಸ್ಐ ನೇಮಕಾತಿ ಹಗರಣದಲ್ಲಿ ಸಿಬ್ಬಂದಿ ಮೂಲಕ ಅಭ್ಯರ್ಥಿಗಳೊಂದಿಗೆ ಕೋಟ್ಯಾಂತರ ರೂಪಾಯಿ ಪಡೆದ ಆರೋಪ ಹಿನ್ನೆಲೆ ಎಡಿಜಿಪಿ ದರ್ಜೆ ಅಧಿಕಾರಿಯನ್ನ ಜುಲೈ 4ರಂದು ಸಿಐಡಿ ಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿ ಇಟ್ಟಿತ್ತು.

ವಿಚಾರಣೆ ವೇಳೆ ಪೌಲ್ ನಾನೇನು ತಪ್ಪು ಮಾಡಿಲ್ಲ.. ನಡೆದಿರುವ ಅವ್ಯವಹಾರ ನನ್ನ ಗಮನಕ್ಕೆ ಬಂದಿಲ್ಲ ಎಂದು ತನಿಖಾಧಿಕಾರಿಗಳ‌ ಮುಂದೆ ಹೇಳಿಕೆ ನೀಡಿದ್ದರು. ಜೊತೆಗೆ ನೇಮಕಾತಿ ವಿಭಾಗದಲ್ಲಿ ಕೆಲಸ‌ ಮಾಡುತ್ತಿದ್ದ ಡಿವೈಎಸ್ಪಿ ಶಾಂತಕುಮಾರ್, ಸಿಬ್ಬಂದಿ ಶ್ರೀಧರ್, ಹರ್ಷ, ಶ್ರೀನಿವಾಸ್ ಅವರನ್ನು ಬಾಡಿ ವಾರೆಂಟ್ ಮೇರೆಗೆ ಕಸ್ಟಡಿಗೆ ಪಡೆದುಕೊಂಡು ಪರಸ್ಪರ ವಿಚಾರಣೆಗೊಳಪಡಿಸಿದ್ದರು.

ತಾಜಾ ಸುದ್ದಿ



Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,591,112
Recovered
0
Deaths
528,655
Last updated: 4 minutes ago